Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:42 - ಕನ್ನಡ ಸಮಕಾಲಿಕ ಅನುವಾದ

42 ನಾನು ಯಾಕೋಬನಿಗೆ, ಇಸಾಕನಿಗೆ ಮತ್ತು ಅಬ್ರಹಾಮನಿಗೆ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ದೇಶವನ್ನು ದಯೆಯಿಂದ ನೆನಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯಕೋಬ್, ಇಸಾಕ್ ಹಾಗು ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಳ್ಳುವೆನು. ಅವುಗಳನ್ನು ನೆರವೇರಿಸುವೆನು. ಅವರ ಸ್ವಂತ ನಾಡನ್ನು ಕರುಣೆಯಿಂದ ಜ್ಞಾಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:42
26 ತಿಳಿವುಗಳ ಹೋಲಿಕೆ  

ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.


ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ಈಜಿಪ್ಟಿನವರು ದಾಸರನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲರ ನರಳುವಿಕೆಯನ್ನು ಕೇಳಿ, ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.


ದೇವರು ಅವರ ನರಳಾಟವನ್ನು ಕೇಳಿದಾಗ, ಅವರು ಅಬ್ರಹಾಮ, ಇಸಾಕ ಮತ್ತು ಯಾಕೋಬನ ಸಂಗಡ ತಾವು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡರು.


ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ


ಆಗ ಯೆಹೋವ ದೇವರು ತಮ್ಮ ದೇಶಕ್ಕೋಸ್ಕರ ಅಭಿಮಾನಗೊಂಡು, ತಮ್ಮ ಜನರನ್ನು ಕನಿಕರಿಸುವರು.


ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.


ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.


ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು.


ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು.”


ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ.


ಆಗ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ಈಜಿಪ್ಟಿಗೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.


ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು.


ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.


ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ.


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು