Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:43 - ಕನ್ನಡ ಸಮಕಾಲಿಕ ಅನುವಾದ

43 ಅವರು ಬಿಟ್ಟುಹೋದ ಸ್ವದೇಶವು ಯಾರೂ ಇಲ್ಲದೆ ಹಾಳಾದ ವೇಳೆಯಲ್ಲಿ ತನ್ನ ವಿಶ್ರಾಂತಿಯನ್ನು ಅನುಭವಿಸುವುದು. ಆದರೆ ಅವರು ತಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ಅನುಭವಿಸುವರು. ಅದು ಏಕೆಂದರೆ, ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ತಾತ್ಸಾರ ಮಾಡಿದ್ದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದರೆ ಅವರು ಬಿಟ್ಟುಹೋದ ಸ್ವಂತ ನಾಡು ಮೊಟ್ಟಮೊದಲು ನಿರ್ಜನವಾಗಬೇಕು; ಅದು ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು; ಅವರು ಸರ್ವೇಶ್ವರನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣ ತಮ್ಮ ಪಾಪದ ಫಲವನ್ನು ಸವಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಹೊಂದುವದು. ಅವರು ಯೆಹೋವನ ಆಜ್ಞೆಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “ದೇಶವು ಬರಿದಾಗಿದ್ದು ವಿಶ್ರಾಂತಿಯನ್ನು ಅನುಭವಿಸುವುದು. ಆಗ ಜೀವಂತವಾಗಿ ಉಳಿದವರು ತಮ್ಮ ಪಾಪಗಳಿಗೆ ಬರತಕ್ಕ ಶಿಕ್ಷೆಯನ್ನು ಅನುಭವಿಸುವರು. ನನ್ನ ನಿಯಮಗಳನ್ನು ದ್ವೇಷಿಸಿ ನನ್ನ ವಿಧಿಗಳಿಗೆ ಅವಿಧೇಯರಾದ್ದರಿಂದ ತಮಗೆ ಶಿಕ್ಷೆಯಾಯಿತೆಂದು ಅವರು ಅರಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:43
28 ತಿಳಿವುಗಳ ಹೋಲಿಕೆ  

ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ,


ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.


ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.


ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.


ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’


ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.


ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.


ನಾನು ಶ್ರಮೆಪಟ್ಟದ್ದು ನನಗೆ ಒಳ್ಳೆಯದಾಯಿತು ಅದರಿಂದ ನಿಮ್ಮ ತೀರ್ಪುಗಳನ್ನು ಕಲಿತೆನು.


ನಾನು ಬಾಧೆಪಡುವುದಕ್ಕಿಂತ ಮುಂಚೆ ದಾರಿತಪ್ಪಿಹೋಗುತ್ತಿದ್ದೆನು, ಆದರೆ ಈಗ ನಿಮ್ಮ ವಾಕ್ಯವನ್ನು ಪಾಲಿಸುತ್ತಿದ್ದೇನೆ.


ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


“ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ.


ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.


ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳುವೆನು. ನನ್ನ ಪ್ರಾಣವು ನಿಮ್ಮನ್ನು ತಿರಸ್ಕರಿಸುವುದಿಲ್ಲ.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು