Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:44 - ಕನ್ನಡ ಸಮಕಾಲಿಕ ಅನುವಾದ

44 ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ. ತಾತ್ಸಾರ ಮಾಡುವುದಿಲ್ಲ, ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವುದಿಲ್ಲ. ನಾನು ಅವರ ದೇವರಾದ ಸರ್ವೇಶ್ವರನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವದಿಲ್ಲ, ತಾತ್ಸಾರಮಾಡುವದಿಲ್ಲ; ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವದಿಲ್ಲ; ಅವರನ್ನು ಇಲ್ಲದಂತೆ ಮಾಡುವದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಅವರು ನಿಜವಾಗಿ ಪಾಪಮಾಡಿದ್ದರೂ ಸಹಾಯಕ್ಕಾಗಿ ಅವರು ನನ್ನ ಬಳಿಗೆ ಬಂದರೆ ನಾನು ಅವರಿಗೆ ವಿಮುಖನಾಗುವುದಿಲ್ಲ. ಅವರು ತಮ್ಮ ಶತ್ರುಗಳ ದೇಶದಲ್ಲಿದ್ದರೂ ನಾನು ಅವರಿಗೆ ಕಿವಿಗೊಡುವೆನು. ಅವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ. ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಯಾಕೆಂದರೆ ನಾನೇ ಅವರ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:44
20 ತಿಳಿವುಗಳ ಹೋಲಿಕೆ  

ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?


ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.


ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.


ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’


ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.


ಆದರೂ ನನ್ನ ಪ್ರೀತಿ, ಕರುಣೆಯನ್ನು ಆತನಿಂದ ಸಂಪೂರ್ಣವಾಗಿ ತೊಲಗಿಸೆನು. ಇಲ್ಲವೆ ನನ್ನ ನಂಬಿಗಸ್ತಿಕೆಯಿಂದ ನಾನು ಜಾರಿಹೋಗೆನು.


ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳುವೆನು. ನನ್ನ ಪ್ರಾಣವು ನಿಮ್ಮನ್ನು ತಿರಸ್ಕರಿಸುವುದಿಲ್ಲ.


ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.


ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.


“ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.


ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು