Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:9 - ಕನ್ನಡ ಸಮಕಾಲಿಕ ಅನುವಾದ

9 “ ‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಬಳಿಕ ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:9
31 ತಿಳಿವುಗಳ ಹೋಲಿಕೆ  

ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ.


ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು. ಆದ್ದರಿಂದ ನಾನೇ ಯೆಹೋವ ದೇವರೆಂದು ನಿಮಗೆ ಗೊತ್ತಾಗುವುದು.


ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿದಿರಿ. ಅವರು ಸ್ವಾಧೀನಮಾಡಿಕೊಳ್ಳುವರು ಎಂದು ನೀವು ಅವರ ಪಿತೃಗಳಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಬರಮಾಡಿದಿರಿ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.


‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


ನಿಮಗೆ ಕೊಡುತ್ತೇನೆಂದು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಯೆಹೋವ ದೇವರು ಭೂಮಿಯ ಮೇಲೆ ನಿಮ್ಮನ್ನು ಸಂತಾನ, ಪಶು ಮತ್ತು ಕೃಷಿ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವರು.


ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ


ನೀವು ಹೇಳಿದ್ದೇನಂದರೆ, “ನಾನು ಆಯ್ದುಕೊಂಡವನ ಸಂಗಡ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ. ನಾನು ನನ್ನ ಸೇವಕನಾದ ದಾವೀದನಿಗೆ ಪ್ರಮಾಣ ಮಾಡಿದ್ದೇನೆ.


ನಿಮ್ಮ ಸಂತಾನಕ್ಕೂ ನಿಮ್ಮ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.


ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.


ದೇವರು ಇಸ್ರಾಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.


ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ನಾನು ಅವನನ್ನು ಸಹ ಆಶೀರ್ವದಿಸುವೆನು. ಅವನನ್ನು ಅಭಿವೃದ್ಧಿ ಮಾಡಿ, ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.


ಆದರೆ ನಾನು ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀನು, ನಿನ್ನ ಸಂಗಡ ನಿನ್ನ ಮಕ್ಕಳು, ನಿನ್ನ ಹೆಂಡತಿ ಹಾಗೂ ಸೊಸೆಯರು ನಾವೆಯೊಳಗೆ ಸೇರಬೇಕು.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.


ಆಗ ನಾನು ಅವರಿಗೆ, “ಪರಲೋಕದ ದೇವರು ನಮಗೆ ಸಫಲತೆ ಅನುಗ್ರಹಿಸುವರು. ಅವರ ಸೇವಕರಾದ ನಾವು ಪುನಃ ಕಟ್ಟುವ ಕಾರ್ಯ ಪ್ರಾರಂಭಿಸುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಯಾವುದೇ ಪಾಲಾದರೂ ಹಕ್ಕಾದರೂ ಐತಿಹಾಸಿಕ ಬಾಧ್ಯತೆಯಾದರೂ ಇರುವುದಿಲ್ಲ,” ಎಂದು ಹೇಳಿದೆನು.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ದೇವರು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು, ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಶಾಶ್ವತವಾದ ಸ್ವತ್ತನ್ನಾಗಿ ಕೊಡುತ್ತೇನೆ,’ ಎಂದು ಹೇಳಿದರು.


ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ,


ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.


ನಾನು ನಿಮ್ಮವನಾಗಿದ್ದೇನೆ ನಾನು ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನಿಮ್ಮಲ್ಲಿ ಉಳುಮೆ ಮಾಡಿ ಬಿತ್ತಲಾಗುತ್ತದೆ.


ಇದಲ್ಲದೆ ನಿಮ್ಮ ಸೇವಕನಾದ ನಾನು ನೀವು ಆಯ್ದುಕೊಂಡಂಥ ಅಸಂಖ್ಯಾತ ಜನರ ಮಧ್ಯದಲ್ಲಿ ಇದ್ದೇನೆ.


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು