Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:17 - ಕನ್ನಡ ಸಮಕಾಲಿಕ ಅನುವಾದ

17 ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದ್ದರೆ ಈ ಕ್ರಯ ಅಂತಿಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಬ್ಬನು ಜ್ಯೂಬಿಲಿ ಸಂವತ್ಸರದಲ್ಲಿ ತನ್ನ ಹೊಲವನ್ನು ಕೊಟ್ಟರೆ, ಆಗ ಅದರ ಬೆಲೆಯು ಯಾಜಕನು ತೀರ್ಮಾನಿಸಿದಷ್ಟು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:17
7 ತಿಳಿವುಗಳ ಹೋಲಿಕೆ  

“ ‘ಒಬ್ಬನು ತನ್ನ ಮನೆಯನ್ನು ಯೆಹೋವ ದೇವರಿಗೆ ಪರಿಶುದ್ಧವಾಗಿರಲೆಂದು ಪ್ರತಿಷ್ಠೆಪಡಿಸಿದರೆ, ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಪರೀಕ್ಷಿಸಿ ಕ್ರಯವನ್ನು ಕಟ್ಟಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಸ್ಥಿರವಾಗಿರಬೇಕು.


“ ‘ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಯೆಹೋವ ದೇವರಿಗೆ ಪ್ರತಿಷ್ಠಿಸಿದರೆ, ಅದರ ಬೀಜದ ಪ್ರಕಾರ ಕ್ರಯ ಕಟ್ಟಬೇಕು. ಒಂದು ಓಮೆರ್ ಜವೆಗೋಧಿಯನ್ನು, ಬೀಜಕ್ಕೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಡಬೇಕಾಗುವುದು.


ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪ್ರತಿಷ್ಠೆ ಮಾಡಿದರೆ, ಜೂಬಿಲಿ ಸಂವತ್ಸರದವರೆಗೆ ಮಿಕ್ಕ ವರ್ಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ನಿರ್ಧರಿಸಿ, ಕಟ್ಟಿದ ಕ್ರಯದಿಂದ ಕಳೆಯಬೇಕು.


ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.


ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.


ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು.


“ ‘ಜೂಬಿಲಿಯ ಈ ವರ್ಷದಲ್ಲಿ ಪ್ರತಿಯೊಬ್ಬನು ತನ್ನ ಆಸ್ತಿಗೆ ಹಿಂದಿರುಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು