Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:21 - ಕನ್ನಡ ಸಮಕಾಲಿಕ ಅನುವಾದ

21 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲ ಸರ್ವೇಶ್ವರನ ಸ್ವಕೀಯ ಹೊಲವಾದಂತೆ ಅವರ ಸೊತ್ತಾಗಿಯೇ ಇರಬೇಕು. ಅದು ಯಾಜಕರ ವಶದಲ್ಲಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನ ಸ್ವಕೀಯವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:21
11 ತಿಳಿವುಗಳ ಹೋಲಿಕೆ  

ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.


“ಇಸ್ರಾಯೇಲರು ಯೆಹೋವ ದೇವರಿಗೆ ಹರಕೆಮಾಡಿ ಸಮರ್ಪಿಸಿದ ಪ್ರತಿಯೊಂದೂ ನಿನ್ನದಾಗಿದೆ.


ಆದರೆ ಸುತ್ತಲೂ ಗೋಡೆಗಳಿಲ್ಲದೆ ಹಳ್ಳಿಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದು. ಜೂಬಿಲಿಯ ವರ್ಷದಲ್ಲಿ ಅವು ಬಿಡುಗಡೆ ಆಗಬೇಕು.


ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು.


ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.


ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ, ಅವನ ಆಸ್ತಿಯೆಲ್ಲಾ ದಂಡವಾಗಿ ತೆಗೆದುಕೊಳ್ಳಲಾಗುವುದೆಂದೂ, ಅವನು ಸೆರೆಯಿಂದ ಬಂದವರ ಕೂಟದಿಂದ ಬಹಿಷ್ಕೃತನಾಗುವನು ಎಂದೂ ಪ್ರಕಟಿಸಿದರು.


ಆದರೂ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರಿಗೆ ಅರ್ಪಿತವಾದವುಗಳು. ರಾಹಾಬಳೆಂಬ ವೇಶ್ಯೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಆಕೆಯು ಬಚ್ಚಿಟ್ಟಿದ್ದಳು.


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,


ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ, ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ, ಅದನ್ನು ಅನಂತರ ವಿಮೋಚಿಸಕೂಡದು.


“ ‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು