Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:28 - ಕನ್ನಡ ಸಮಕಾಲಿಕ ಅನುವಾದ

28 “ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಯಾರಾದರು ನರಮಾನವನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ, ಬೇರೆ ಯಾವುದನ್ನೇ ಆಗಲಿ ಯಾವ ಶರತ್ತೂ ಇಲ್ಲದೆ ಸಂಪೂರ್ಣವಾಗಿ ಸರ್ವೇಶ್ವರನದಾಗಿರಲು ಹರಕೆ ಮಾಡಿಕೊಟ್ಟರೆ ಅದನ್ನು ಮಾರಲೂಕೂಡದು, ಬಿಡಿಸಿಕೊಳ್ಳಲೂಬಾರದು. ಸಂಪೂರ್ಣ ಸರ್ವೇಶ್ವರನದಾಗಿರಲು ಸಮರ್ಪಿಸುವಂಥದೆಲ್ಲಾ ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾವನಾದರೂ ಮನುಷ್ಯನನ್ನಾಗಲಿ ಪಶುವನ್ನಾಗಲಿ ಪಿತ್ರಾರ್ಜಿತಭೂವಿುಯನ್ನಾಗಲಿ ಬೇರೆ ಯಾವದನ್ನಾಗಲಿ ಕೇವಲ ಯೆಹೋವನದಾಗಿರುವದಕ್ಕೆ ಹರಕೆಮಾಡಿಕೊಟ್ಟರೆ ಅದನ್ನು ಮಾರಲೂ ಕೂಡದು ಬಿಡಿಸಿಕೊಳ್ಳಲೂ ಕೂಡದು. ಕೇವಲ ಯೆಹೋವನದಾಗಿರುವದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಜನರು ಯೆಹೋವನಿಗೆ ಸಲ್ಲಿಸುವ ವಿಶೇಷ ಬಗೆಯ ಕಾಣಿಕೆಯು ಯೆಹೋವನಿಗೆ ಮಾತ್ರ ಸೇರಿದ್ದಾಗಿರುತ್ತದೆ. ಅದನ್ನು ಬಿಡಿಸಿಕೊಳ್ಳುವುದಕ್ಕಾಗಲಿ ಮಾರುವುದಕ್ಕಾಗಲಿ ಆಗುವುದಿಲ್ಲ. ಅದು ಯೆಹೋವನದ್ದಾಗಿರುತ್ತದೆ. ಈ ಕಾಣಿಕೆಗಳು ಜನರನ್ನು, ಪಶುಗಳನ್ನು ಮತ್ತು ಪಿತ್ರಾರ್ಜಿತ ಸ್ವತ್ತುಗಳನ್ನು ಒಳಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:28
35 ತಿಳಿವುಗಳ ಹೋಲಿಕೆ  

“ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.


ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.


ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು.


ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.


ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.”


“ಇಸ್ರಾಯೇಲರು ಯೆಹೋವ ದೇವರಿಗೆ ಹರಕೆಮಾಡಿ ಸಮರ್ಪಿಸಿದ ಪ್ರತಿಯೊಂದೂ ನಿನ್ನದಾಗಿದೆ.


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


‘ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ,’ ಎಂದು ಆಣೆ ಇಟ್ಟುಕೊಂಡಿದ್ದರಿಂದ, ನಾವಾದರೋ ನಮ್ಮ ಪುತ್ರಿಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು,” ಎಂದರು.


ಎಲ್ಲಾ ಗಂಡಸರನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲ ಮಾಡಿರಿ,” ಎಂದು ಆಜ್ಞಾಪಿಸಿದರು.


ಅನಂತರ ಅವರು, “ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಬಾರದವರು ಯಾರು?” ಎಂದರು. ಏಕೆಂದರೆ ಯೆಹೋವ ದೇವರ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆ ಇಟ್ಟುಕೊಂಡಿದ್ದರು.


ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,


ಆದರೆ ಅದು ಅಶುದ್ಧ ಪಶುಗಳಲ್ಲಿ ಹುಟ್ಟಿದ್ದಾಗಿದ್ದರೆ, ಹರಕೆ ಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ಕಟ್ಟಿದ ಕ್ರಯದ ಪ್ರಕಾರ ಮಾರಬೇಕು.


“ ‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು.


ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು.


ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.


ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.


ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.


ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು