Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:3 - ಕನ್ನಡ ಸಮಕಾಲಿಕ ಅನುವಾದ

3 ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಪ್ಪತ್ತರಿಂದ ಅರವತ್ತು ವರ್ಷ ವಯಸ್ಸುಳ್ಳ ಪುರುಷನ ಪರವಾಗಿ ಐವತ್ತು ಬೆಳ್ಳಿನಾಣ್ಯಗಳನ್ನು ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಪ್ಪತ್ತು ವರುಷದಿಂದ ಅರುವತ್ತು ವರುಷದ ಪರ್ಯಂತರ ವಯಸ್ಸುಳ್ಳ ಪುರುಷನಿಗೋಸ್ಕರ ಐವತ್ತು ರೂಪಾಯಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಪ್ಪತ್ತರಿಂದ ಅರವತ್ತು ವರ್ಷದ ಒಳಗಿರುವ ಮನುಷ್ಯನ ಬೆಲೆ ಐವತ್ತು ಶೆಕೆಲ್ ಬೆಳ್ಳಿಯಾಗಿದೆ. (ಬೆಳ್ಳಿಯನ್ನು ಅಳೆಯಲು ಅಧಿಕೃತ ಅಳತೆಯನ್ನು ಉಪಯೋಗಿಸಬೇಕು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:3
10 ತಿಳಿವುಗಳ ಹೋಲಿಕೆ  

ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.


ಅವು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ಗೇರಾ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್ ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ವಿಮೋಚಿಸಿಕೊಳ್ಳಬೇಕು.


ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಇಪ್ಪತ್ತು ಗೇರಾ ತೂಕದ ಶೆಕೆಲ್ ಮೇರೆಗೆ ನೀವು ಕ್ರಯವನ್ನು ನಿಗದಿಮಾಡಬೇಕು.


ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.


ಒಬ್ಬೊಬ್ಬನಿಗೆ ಐದು ಶೆಕೆಲ್ ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು.


“ ‘ಒಬ್ಬನು ತನ್ನ ಮನೆಯನ್ನು ಯೆಹೋವ ದೇವರಿಗೆ ಪರಿಶುದ್ಧವಾಗಿರಲೆಂದು ಪ್ರತಿಷ್ಠೆಪಡಿಸಿದರೆ, ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಪರೀಕ್ಷಿಸಿ ಕ್ರಯವನ್ನು ಕಟ್ಟಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಸ್ಥಿರವಾಗಿರಬೇಕು.


ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.


“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.


ಹೆಣ್ಣಾಗಿದ್ದರೆ, ನೀನು ನೇಮಿಸುವ ಕ್ರಯವು ಮೂವತ್ತು ಶೆಕೆಲ್ ಆಗಿರಬೇಕು.


ಪರಿಶುದ್ಧಾಲಯದ ಸೇವೆಗೆ ನೇಮಕವಾದ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ವಿಶೇಷವಾಗಿ ಅರ್ಪಿಸಿದ ಕಾಣಿಕೆಯಾಗಿತ್ತು, ಅದು ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು