ಯಾಜಕಕಾಂಡ 27:30 - ಕನ್ನಡ ಸಮಕಾಲಿಕ ಅನುವಾದ30 “ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ಹೊಲದ ದವಸಧಾನ್ಯವಾಗಲಿ, ತೋಟದ ಹಣ್ಣುಹಂಪಲು ಆಗಲಿ, ಭೂಮಿಯಿಂದುಂಟಾದ ಎಲ್ಲ ಆದಾಯದಲ್ಲಿ ಹತ್ತನೆಯ ಒಂದು ಪಾಲು ಸರ್ವೇಶ್ವರನದಾಗಿರಬೇಕು. ಅದು ಸರ್ವೇಶ್ವರನಿಗೆ ಮೀಸಲಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹೊಲದ ಬೆಳೆಯಾಗಲಿ ತೋಟದ ಹಣ್ಣುಗಳಾಗಲಿ ಭೂವಿುಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಪಾಲು ಯೆಹೋವನದಾಗಿರಬೇಕು; ಅದು ಯೆಹೋವನಿಗೆ ಮೀಸಲಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ. ಅಧ್ಯಾಯವನ್ನು ನೋಡಿ |
ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.