Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:9 - ಕನ್ನಡ ಸಮಕಾಲಿಕ ಅನುವಾದ

9 “ ‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಸರ್ವೇಶ್ವರನಿಗೆ ಸಮರ್ಪಿಸಬಹುದಾದ ಪ್ರಾಣಿಯನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದು ದೇವರ ಸೊತ್ತಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಒಬ್ಬನು ಪಶುಗಳನ್ನು ಯೆಹೋವನಿಗೆ ಯಜ್ಞಕ್ಕಾಗಿ ಪ್ರತಿಷ್ಠಿಸಬಹುದು. ಯಾವನಾದರೂ ಅಂಥ ಪಶುವನ್ನು ತಂದರೆ, ಅದು ಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:9
7 ತಿಳಿವುಗಳ ಹೋಲಿಕೆ  

ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.


ಅದನ್ನು ಒಳ್ಳೆಯದಕ್ಕೆ ಕೆಟ್ಟದ್ದನ್ನಾಗಲಿ, ಕೆಟ್ಟದ್ದಕ್ಕೆ ಒಳ್ಳೆಯದನ್ನಾಗಲಿ ಬದಲು ಮಾಡಬಾರದು, ಮಾರ್ಪಡಿಸಲೂಬಾರದು. ಅವನು ಗೊತ್ತುಮಾಡಿದ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ, ಅದು ಮತ್ತು ಅದರ ಬದಲಾಗಿಟ್ಟ ಪಶು ಇವೆರಡೂ ಯೆಹೋವ ದೇವರಿಗೆ ಪರಿಶುದ್ಧವಾಗಿರಬೇಕು.


“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.


ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?


ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.


ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು