Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:17 - ಕನ್ನಡ ಸಮಕಾಲಿಕ ಅನುವಾದ

17 “ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:17
42 ತಿಳಿವುಗಳ ಹೋಲಿಕೆ  

“ಆದರೆ ಮಾಂಸವನ್ನು ಅದರ ಜೀವವಾಗಿರುವ ರಕ್ತದೊಂದಿಗೆ ನೀವು ತಿನ್ನಬಾರದು.


ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ಅದರ ರಕ್ತವನ್ನು ಮಾತ್ರ ಭುಜಿಸಬಾರದು, ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ರಕ್ತವನ್ನು ಮಾತ್ರ ಭುಜಿಸದ ಹಾಗೆ ಜಾಗ್ರತೆಯಾಗಿರಿ. ಏಕೆಂದರೆ ರಕ್ತವು ಪ್ರಾಣವೇ. ಮಾಂಸದೊಡನೆ ಅದರ ಜೀವವನ್ನು ತಿನ್ನಬಾರದು.


“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ನೀವು ಎತ್ತು ಇಲ್ಲವೆ ಕುರಿ ಇಲ್ಲವೆ ಮೇಕೆಗಳ ಕೊಬ್ಬನ್ನು ತಿನ್ನಬಾರದು.


ರಕ್ತವನ್ನು ಮಾತ್ರ ಭುಜಿಸಬೇಡಿರಿ. ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.


ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’


ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’ ” ಎಂದರು.


ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.


ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕು. ಇವುಗಳಿಂದ ನಿಮ್ಮನ್ನು ಕಾಪಾಡಿಕೊಳ್ಳುವುದರಿಂದ ನಿಮಗೆ ಒಳಿತಾಗುವುದು. ನಿಮಗೆ ಶುಭವಾಗಲಿ.


“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?


ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.


ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು.


ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ.


ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಇದು ಅವರಿಗೆ ಶಾಶ್ವತ ಕಟ್ಟಳೆಯಾಗಿರಬೇಕು. “ಶುದ್ಧೀಕರಣದ ನೀರನ್ನು ಚಿಮುಕಿಸುವವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಂಜೆಯವರೆಗೆ ಅಪವಿತ್ರನಾಗಿರುವನು.


“ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.


ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”


“ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ.


ನೈವೇದ್ಯವಾಗಿ ಅರ್ಪಿಸುವ ಎದೆಯನ್ನೂ ತೊಡೆಯನ್ನೂ ಅವರು ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನು ನೈವೇದ್ಯವಾಗಿ ನಿವಾಳಿಸುವುದಕ್ಕೆ ಯೆಹೋವ ದೇವರ ಸನ್ನಿಧಿಯಲ್ಲಿ ತರಬೇಕು. ಯೆಹೋವ ದೇವರು ಆಜ್ಞಾಪಿಸಿದ ಹಾಗೆ ಅದು ನಿನಗೂ, ನಿನ್ನೊಂದಿಗೆ ನಿನ್ನ ಪುತ್ರರಿಗೂ ನಿತ್ಯ ಕಟ್ಟಳೆಯಾಗಿ ಸಿಕ್ಕಬೇಕು,” ಎಂದು ಹೇಳಿದನು.


“ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.


ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು.


ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.


ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.


“ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.


ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.”


ಅದನ್ನು ಭುಜಿಸದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.


ಇದಲ್ಲದೆ ದಹನಬಲಿಗಳೂ, ಸಮಾಧಾನದ ಬಲಿಗಳ ಕೊಬ್ಬೂ, ದಹನಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳವಾಗಿದ್ದವು. ಹೀಗೆ ಯೆಹೋವ ದೇವರ ಆಲಯದ ಸೇವೆಯು ಸಿದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು