Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:12 - ಕನ್ನಡ ಸಮಕಾಲಿಕ ಅನುವಾದ

12 ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹಾಗು ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲ ಪಾಳೆಯದ ಹೊರಗೆ, ವೇದಿಕೆಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಕಟ್ಟಿಗೆಯ ಮೇಲಿರಿಸಿ ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:12
16 ತಿಳಿವುಗಳ ಹೋಲಿಕೆ  

ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಮಹಾ ಪವಿತ್ರ ಸ್ಥಳದೊಳಗೆ ಹೋದ ಮೇಲೆ, ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಟ್ಟು ಬಿಡಲಾಗುತ್ತವಲ್ಲಾ.


ಇದಲ್ಲದೆ ಹೋರಿಯ ಮಾಂಸವನ್ನೂ ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿದೆ.


ಇದಲ್ಲದೆ ಮಹಾಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯಾವುದರ ರಕ್ತವು ತರಲಾಗಿತ್ತೋ, ಆ ಪಾಪ ಪರಿಹಾರದ ಬಲಿಯ ಹೋರಿಯನ್ನು ಮತ್ತು ದೋಷಪರಿಹಾರ ಬಲಿಯ ಹೋತವನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಅವುಗಳ ಚರ್ಮವನ್ನೂ, ಮಾಂಸವನ್ನೂ, ಸಗಣಿಯನ್ನೂ ಸುಡಬೇಕು.


ಹಸುವನ್ನು ಅವನ ಎದುರಿನಲ್ಲಿಯೇ ಸುಡಿಸಬೇಕು. ಅದರ ತೊಗಲನ್ನೂ ಮಾಂಸವನ್ನೂ ರಕ್ತವನ್ನೂ ಮತ್ತು ಅದರ ಸಗಣಿಯ ಕೂಡ ಸುಡಬೇಕು.


ನೀವು ಅದನ್ನು ಯಾಜಕನಾದ ಎಲಿಯಾಜರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ತನ್ನ ಮುಂದೆ ವಧೆಮಾಡಿಸಬೇಕು.


ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು.


ಸ್ತ್ರೀ ಪುರುಷವೆಂಬ ವ್ಯತ್ಯಾಸವಿಲ್ಲದೆ ಎಲ್ಲರನ್ನು ಹೊರಹಾಕಬೇಕು. ನಾನು ಅವರ ಮಧ್ಯದಲ್ಲಿ ವಾಸಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಪಾಳೆಯದ ಹೊರಗೆ ಕಳುಹಿಸಬೇಕು,” ಎಂಬುದೆ.


ಆ ವ್ಯಾಧಿ ಅವನಲ್ಲಿ ಇರುವಷ್ಟು ದಿನಗಳೂ ಅವನು ಅಶುದ್ಧನಾಗಿರುವನು. ಅವನು ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.


ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು.


ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಹೋರಿಯ ಮಾಂಸವನ್ನೂ, ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.


ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.


ಇದಲ್ಲದೆ ನೀನು ಹೋರಿಯನ್ನೂ ಸಹ ದೋಷಪರಿಹಾರ ಬಲಿಗೆ ತೆಗೆದುಕೊಂಡು ಆಲಯದ ನೇಮಕವಾದ ಸ್ಥಳದಲ್ಲಿ, ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.


ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.


ಏಕೆಂದರೆ ಯಾಜಕನಿಗಾಗಿರುವ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಸಂಪೂರ್ಣವಾಗಿ ಸುಟ್ಟಿರಬೇಕು. ಅದನ್ನು ತಿನ್ನಬಾರದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು