Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:2 - ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:2
18 ತಿಳಿವುಗಳ ಹೋಲಿಕೆ  

ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


“ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


ಅದೇ ಬಾಯಿಂದ ಸ್ತುತಿ ಮತ್ತು ಶಾಪ ಬರುತ್ತವೆ. ನನ್ನ ಪ್ರಿಯರೇ, ಇವುಗಳು ಹೀಗಿರಬಾರದು.


ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.


ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.


ಆದರೆ ಯೋನಾತಾನನು ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಕೇಳದೆ ಇದ್ದ ಕಾರಣ, ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ, ಅದನ್ನು ಜೇನು ತೊಟ್ಟಿಯಲ್ಲಿ ಅದ್ದಿ, ತನ್ನ ಬಾಯಿಗೆ ಹಾಕಿಕೊಂಡನು. ಅದರಿಂದ ಅವನ ಕಣ್ಣುಗಳು ಕಳೆಯನ್ನು ಹೊಂದಿದವು.


ಬದುಕಿ ಉಳಿಯಲು ಅಲ್ಲಿ ಓಡಿಹೋಗತಕ್ಕ ಕೊಲೆಪಾತಕನ ವಿವರವೇನೆಂದರೆ, ತಿಳಿಯದೆ ಇಲ್ಲವೆ ಪೂರ್ವ ಕಲ್ಪಿತ ಹಗೆ ಮಾಡದೆ, ತನ್ನ ನೆರೆಯವನನ್ನು ಹೊಡೆದವನೇ.


“ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


“ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ


ಅಬೀಮೆಲೆಕನು ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಮಗೆ ಮಾಡಿದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಿನಗೆ ನಾನು ಏನು ಅಪರಾಧ ಮಾಡಿದ್ದೇನೆ? ನೀನು ನನಗೆ ಮಾಡಬಾರದ ಕೆಲಸಗಳನ್ನು ಮಾಡಿದ್ದೀಯೆ,” ಎಂದನು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


“ ‘ಇದಲ್ಲದೆ ಯಾವನಾದರೂ ತಿಳಿಯದೆ ಪರಿಶುದ್ಧವಾದದ್ದನ್ನು ತಿಂದರೆ, ಅವನು ಅದರ ಐದನೆಯ ಪಾಲನ್ನು ಕೂಡಿಸಿ, ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡಬೇಕು.


ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?


ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು