Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:22 - ಕನ್ನಡ ಸಮಕಾಲಿಕ ಅನುವಾದ

22 “ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಮುಖ್ಯಾಧಿಕಾರಿಯೊಬ್ಬನು ತನ್ನ ದೇವರಾದ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಒಬ್ಬ ಅಧಿಪತಿಯು ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:22
15 ತಿಳಿವುಗಳ ಹೋಲಿಕೆ  

“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:


“ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ


ಮೋಶೆಯೂ, ಯಾಜಕನಾದ ಎಲಿಯಾಜರನೂ, ಸಮೂಹದ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.


ಇಸ್ರಾಯೇಲರೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯ ಪ್ರಸಿದ್ಧರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಗೆ ಎದುರಾಗಿ ತಿರುಗಿಬಿದ್ದರು.


“ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.


ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ:


ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?


“ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.


“ ‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ,


ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು