Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:25 - ಕನ್ನಡ ಸಮಕಾಲಿಕ ಅನುವಾದ

25 ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:25
18 ತಿಳಿವುಗಳ ಹೋಲಿಕೆ  

ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು.


ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.


ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು.


ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ತಿಳಿದಿಲ್ಲವೋ? ಭೂಮಿಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗಲಿಲ್ಲವೋ?


“ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು.


ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.


ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರೊಳಗಿರುವುದೆಲ್ಲವನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.


ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.


ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.


ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.


ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು