Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:27 - ಕನ್ನಡ ಸಮಕಾಲಿಕ ಅನುವಾದ

27 “ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಿಮ್ಮ ನಾಡಿನವರಲ್ಲಿ ಬೇರೆ ಯಾರಾದರು ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿಮ್ಮ ದೇಶಸ್ಥರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಸಾಮಾನ್ಯ ಜನರಲ್ಲಿ ಒಬ್ಬನು ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:27
14 ತಿಳಿವುಗಳ ಹೋಲಿಕೆ  

“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:


“ ‘ಯಾವನಾದರೂ ಒಬ್ಬನು ತಿಳಿಯದೆ ಪಾಪ ಮಾಡುವುದಾದರೆ, ಪಾಪ ಪರಿಹಾರಕ ಬಲಿಗಾಗಿ ಒಂದು ವರ್ಷದ ಮೇಕೆಯನ್ನು ತರಬೇಕು.


“ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ


ಸ್ಥಳೀಯ ಮೂಲದ ಇಸ್ರಾಯೇಲರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ನಿಯಮ ಇರಬೇಕು.


“ಇಸ್ರಾಯೇಲರಿಗೆ ಹೀಗೆ ಹೇಳು: ‘ಪುರುಷನಾದರೂ ಸ್ತ್ರೀಯಾದರೂ ಮತ್ತೊಬ್ಬರಿಗೆ ಮೋಸಮಾಡಿ ಯೆಹೋವ ದೇವರಿಗೆ ಅಪನಂಬಿಗಸ್ತರಾದರೆ, ಆ ವ್ಯಕ್ತಿ ಅಪರಾಧಿ.


ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’ ” ಎಂದರು.


ಸ್ವದೇಶದಲ್ಲಿ ಹುಟ್ಟಿದವನಿಗೂ, ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯನಿಗೂ ಒಂದೇ ನಿಯಮವಿರಲಿ,” ಎಂದು ಹೇಳಿದರು.


“ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


ಅದಾದ ಮೇಲೆ ಆರೋನನು ಜನರಿಗಾಗಿ ಅರ್ಪಿಸಿದ ಬಲಿಯನ್ನು ತಂದು, ಹೋತವನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಪರಿಹಾರದ ಬಲಿಯಾಗಿರುವುದನ್ನು ವಧಿಸಿ, ಮೊದಲನೆಯದರ ಹಾಗೆ ಅದನ್ನು ಸಮರ್ಪಿಸಿದನು.


ತಿಳಿಯದೆ ಅಥವಾ ಅಜ್ಞಾನದಿಂದ ಪಾಪಮಾಡುವ ಪ್ರತಿಯೊಬ್ಬರಿಗೂ ತಿಂಗಳ ಏಳನೇ ದಿನದಲ್ಲಿ ನೀವು ಅದೇ ರೀತಿ ಮಾಡಬೇಕು; ಈ ರೀತಿಯಾಗಿ ನೀವು ದೇವಾಲಯಕ್ಕೆ ಪ್ರಾಯಶ್ಚಿತ್ತವನ್ನು ಮಾಡಬೇಕು.


“ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.


“ ‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ,


ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.


ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು