ಯಾಜಕಕಾಂಡ 4:3 - ಕನ್ನಡ ಸಮಕಾಲಿಕ ಅನುವಾದ3 “ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನೂ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |