ಯಾಜಕಕಾಂಡ 4:30 - ಕನ್ನಡ ಸಮಕಾಲಿಕ ಅನುವಾದ30 ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. ಅಧ್ಯಾಯವನ್ನು ನೋಡಿ |