Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:34 - ಕನ್ನಡ ಸಮಕಾಲಿಕ ಅನುವಾದ

34 ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯಾಜಕನು ಪಾಪಪರಿಹಾರಕಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಕುರಿಮರಿಯ ರಕ್ತವನ್ನೆಲ್ಲಾ ವೇದಿಕೆಯ ಬುಡದಲ್ಲಿ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:34
15 ತಿಳಿವುಗಳ ಹೋಲಿಕೆ  

ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.


ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.


ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.


ಯೆಹೋವ ದೇವರು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು. ಆತನು ನಿಯಮವನ್ನು ಹೆಚ್ಚಿಸಿ, ಘನಪಡಿಸುವನು.


ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು