Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:35 - ಕನ್ನಡ ಸಮಕಾಲಿಕ ಅನುವಾದ

35 ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯಜ್ಞವೇದಿಯಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:35
40 ತಿಳಿವುಗಳ ಹೋಲಿಕೆ  

ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


ಯಾಜಕನ ಕೈಯಲ್ಲಿರುವ ಉಳಿದ ಆ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯಬೇಕು. ಯಾಜಕನು ಅವನಿಗಾಗಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.


ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


“ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.


ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.


ಆದರೆ ಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲಗಳಲ್ಲಿ ಬಿಟ್ಟುಬಿಡಬೇಕು. ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅದು ಶುದ್ಧವಾಗುವುದು.”


ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”


ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು.


ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”


ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.


ತಿಳಿಯದೆ ಪಾಪ ಮಾಡಿದವನಿಗೋಸ್ಕರ ಯಾಜಕನು ಯೆಹೋವ ದೇವರ ಮುಂದೆ ಪ್ರಾಯಶ್ಚಿತ್ತ ಮಾಡಬೇಕು. ಅದು ಪಾಪಕ್ಷಮಾಪಣೆಯಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.


ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.


ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಬಲಿಯಾಗಿರುವ ಟಗರಿನಿಂದ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನು ಮಾಡಿದ ಪಾಪವನ್ನು ಅವನಿಗೆ ಕ್ಷಮಿಸಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು