ಯಾಜಕಕಾಂಡ 5:1 - ಕನ್ನಡ ಸಮಕಾಲಿಕ ಅನುವಾದ1 “ ‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನ್ಯಾಯಾಧಿಕಾರಿಯು ತಿಳಿಸಬೇಕೆಂದು ಕೇಳಿದರೂ ಒಬ್ಬನು ತಾನು ಕಂಡದ್ದನ್ನಾಗಲಿ ಕೇಳಿದ್ದನ್ನಾಗಲಿ ತಿಳಿಸದೆ ಹೋದರೆ ಅವನು ಪಾಪಕ್ಕೆ ಗುರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿ |