Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:11 - ಕನ್ನಡ ಸಮಕಾಲಿಕ ಅನುವಾದ

11 “ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:11
23 ತಿಳಿವುಗಳ ಹೋಲಿಕೆ  

ಆ ಮನುಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತರಬೇಕು. ಅವಳಿಗೋಸ್ಕರ ಕಾಣಿಕೆಯಾಗಿ ಒಂದು ಓಮರ್ ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕಬಾರದು. ಏಕೆಂದರೆ ಅದು ಸಂಶಯವನ್ನು ಸೂಚಿಸುವುದಕ್ಕೂ ಅಪರಾಧವನ್ನು ಹೊರಪಡಿಸುವುದಕ್ಕೂ ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಚೊಕ್ಕ ಬೆಳ್ಳಿಯ ಒಂದು ತಟ್ಟೆ ಮತ್ತು 70 ಶೆಕೆಲ್ ತೂಕದ ಬೆಳ್ಳಿಯ ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಇವೆರಡು ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.


ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.


ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.


ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.


ಓಮೆರ್ ಎಂದರೆ ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಅಳತೆ.


ಓಮೆರದಿಂದ ಅಳತೆಮಾಡಿದಾಗ, ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ. ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.


ಎಂತಲೂ, “ಒಂದು ಜೊತೆ ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿ ಅರ್ಪಿಸಬೇಕು,” ಎಂತಲೂ ಕರ್ತದೇವರ ನಿಯಮದಲ್ಲಿ ಹೇಳಿರುವ ಪ್ರಕಾರ ಅವರು ಸಮರ್ಪಿಸಿದರು.


ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.


“ ‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.


“ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು.


“ಅವನು ಬಡವನಾಗಿದ್ದರೆ ಅಷ್ಟೊಂದು ತರುವುದಕ್ಕೆ ಆಗದಿದ್ದರೆ, ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಬಲಿ ಕೊಡಲು ನೈವೇದ್ಯ ಮಾಡುವುದಕ್ಕೆ ಒಂದು ಕುರಿಮರಿಯನ್ನೂ, ಎಣ್ಣೆ ಬೆರೆಸಿದ ಒಂದುವರೆ ಕಿಲೋಗ್ರಾಂ ನಯವಾದ ಹಿಟ್ಟನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ


ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.


ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು