Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:12 - ಕನ್ನಡ ಸಮಕಾಲಿಕ ಅನುವಾದ

12 ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಯಾಜಕನ ಬಳಿಗೆ ಅದನ್ನು ತಂದ ನಂತರ ಅದು ದೇವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಸರ್ವೇಶ್ವರನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಬಲಿಪೀಠದಲ್ಲಿ ಹೋಮಮಾಡಬೇಕು. ಅದು ದೋಷಪರಿಹಾರಕ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೇವಾರ್ಪಿತವೆಂದು ಸೂಚಿಸುವದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ಹಿಟ್ಟನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಒಂದು ಹಿಡಿಹಿಟ್ಟನ್ನು ಅದರಿಂದ ತೆಗೆದು ದೇವಾರ್ಪಿತವಾಯಿತೆಂದು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿರುವುದು. ಅದು ಪಾಪಪರಿಹಾರಕ ಸಮರ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:12
15 ತಿಳಿವುಗಳ ಹೋಲಿಕೆ  

ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.


ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ಆಗ ಯಾಜಕನು ಜ್ಞಾಪಕಾರ್ಥವಾಗಿ ಕಾಣಿಕೆಯಿಂದ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಸುಟ್ಟು, ಸ್ತ್ರೀಗೆ ಆ ನೀರನ್ನು ಕುಡಿಸಬೇಕು.


ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.


ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.


ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಯಲ್ಲಿಯ ಅವುಗಳ ಮೇಲಿರುವ ಕೊಬ್ಬನ್ನೂ, ಮೂತ್ರ ಜನಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಯೆಹೋವ ದೇವರಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.


ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.


ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


“ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.


ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು