Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:13 - ಕನ್ನಡ ಸಮಕಾಲಿಕ ಅನುವಾದ

13 ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವದು. ನೈವೇದ್ಯದ್ರವ್ಯದಲ್ಲಿ ವಿುಕ್ಕದ್ದು ಹೇಗೆ ಯಾಜಕನಿಗೆ ಆಗುತ್ತದೋ ಇದರಲ್ಲಿಯೂ ವಿುಕ್ಕದ್ದು ಯಾಜಕನಿಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೀಗೆ ಆ ವ್ಯಕ್ತಿಯನ್ನು ಅವನ ದೋಷಗಳಿಂದ ಶುದ್ಧೀಕರಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಧಾನ್ಯನೈವೇದ್ಯದಲ್ಲಿರುವಂತೆಯೇ ಯಜ್ಞದಲ್ಲಿ ಉಳಿದ ಭಾಗವು ಯಾಜಕನಿಗೆ ಸೇರಿದೆ. ಧಾನ್ಯಸಮರ್ಪಣೆಯಲ್ಲಿಯೂ ಉಳಿದ ಭಾಗವು ಯಾಜಕನಿಗೆ ಸೇರಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:13
16 ತಿಳಿವುಗಳ ಹೋಲಿಕೆ  

ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ.


ನನ್ನ ಬಲಿಪೀಠದ ಮೇಲೆ ಬಲಿಯನ್ನು ಅರ್ಪಿಸುವುದಕ್ಕೂ, ಧೂಪವನ್ನು ಸುಡುವುದಕ್ಕೂ, ನನ್ನ ಮುಂದೆ ಏಫೋದನ್ನು ಧರಿಸಿಕೊಂಡಿರುವುದಕ್ಕೂ, ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರಬೇಕೆಂದು ನಾನು ಅವನನ್ನು ಆಯ್ದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲರು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?


ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.


ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ,


ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.


ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು