ಯಾಜಕಕಾಂಡ 5:7 - ಕನ್ನಡ ಸಮಕಾಲಿಕ ಅನುವಾದ7 “ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |