ಯಾಜಕಕಾಂಡ 5:9 - ಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬಳಿಕ ದೋಷಪರಿಹಾರಾರ್ಥಕವಾದ ಆ ಹಕ್ಕಿಯ ರಕ್ತದಲ್ಲಿ ಸ್ವಲ್ಪವನ್ನು ಬಲಿಪೀಠದ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿವಿುಕಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರಕಯಜ್ಞ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಜಕನು ದೋಷಪರಿಹಾರಕ ಯಜ್ಞದಿಂದ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬದಿಯಲ್ಲಿ ಚಿಮಿಕಿಸಬೇಕು. ಬಳಿಕ ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ. ಅಧ್ಯಾಯವನ್ನು ನೋಡಿ |