Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:10 - ಕನ್ನಡ ಸಮಕಾಲಿಕ ಅನುವಾದ

10 ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಾಜಕನು ನಾರುಮಡಿಯ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರುಮಡಿ ಚಡ್ಡಿಯನ್ನು ಹಾಕಿಕೊಂಡು ಬಲಿಪೀಠದ ಮೇಲಿನ ದಹನಬಲಿ ದ್ರವ್ಯದ ಬೂದಿಯನ್ನು ಎತ್ತಿ ವೇದಿಕೆಯ ಬಳಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು ಮಾನರಕ್ಷಕವಾದ ನಾರಿನ ಚಡ್ಡಿಯನ್ನು ಹಾಕಿಕೊಂಡು ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ವೇದಿಯ ಬಳಿಯಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಜಕನು ತನ್ನ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಳ್ಳಬೇಕು. ಯಾಜಕನು ಸರ್ವಾಂಗಹೋಮ ಮಾಡಿದಾಗ ಬೆಂಕಿಯಿಂದ ಉಂಟಾದ ಬೂದಿಯನ್ನು ತೆಗೆದು ವೇದಿಕೆಯ ಬಳಿಯಲ್ಲಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:10
22 ತಿಳಿವುಗಳ ಹೋಲಿಕೆ  

ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.


ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು.


ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು. ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ.


ಆಗ ಹಿರಿಯರಲ್ಲೊಬ್ಬನು ನನ್ನನ್ನು, “ಈ ಬಿಳಿ ನಿಲುವಂಗಿಯನ್ನು ತೊಟ್ಟ ಇವರು ಯಾರು? ಎಲ್ಲಿಂದ ಬಂದವರು?” ಎಂದು ಕೇಳಿದನು.


ಆದರೆ ದುಷ್ಟರು ನಾಶವಾಗುವರು; ಯೆಹೋವ ದೇವರ ಶತ್ರುಗಳು ಗದ್ದೆಯ ಹೂಗಳಂತೆ ಬಾಡಿಹೋಗುವರು; ಹೊಗೆಯಂತೆ ಮಾಯವಾಗುವರು.


ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು, ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ.


ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.


“ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.


ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


“ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ.


ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.


“ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.


ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’ ” ಎಂದರು.


ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.


ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು