Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:11 - ಕನ್ನಡ ಸಮಕಾಲಿಕ ಅನುವಾದ

11 ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ತನ್ನ ವಸ್ತ್ರಗಳನ್ನು ಬದಲಾಯಿಸಿಕೊಂಡು ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:11
14 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.


ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.


ಇದಲ್ಲದೆ ಮಹಾಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯಾವುದರ ರಕ್ತವು ತರಲಾಗಿತ್ತೋ, ಆ ಪಾಪ ಪರಿಹಾರದ ಬಲಿಯ ಹೋರಿಯನ್ನು ಮತ್ತು ದೋಷಪರಿಹಾರ ಬಲಿಯ ಹೋತವನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಅವುಗಳ ಚರ್ಮವನ್ನೂ, ಮಾಂಸವನ್ನೂ, ಸಗಣಿಯನ್ನೂ ಸುಡಬೇಕು.


ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು.


ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು.


ಬಲಿಪೀಠದ ಮೇಲೆ ಬೆಂಕಿಯು ಅದರೊಳಗೆ ಸುಡುತ್ತಲೇ ಇರಬೇಕು. ಅದು ಆರಿಹೋಗಿರಬಾರದು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆಯನ್ನು ಹಾಕಬೇಕು. ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಬಲಿ ಅರ್ಪಣೆಗಳ ಕೊಬ್ಬನ್ನು ಸುಡಬೇಕು.


ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.


“ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು.


ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.


ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು