Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:12 - ಕನ್ನಡ ಸಮಕಾಲಿಕ ಅನುವಾದ

12 ಬಲಿಪೀಠದ ಮೇಲೆ ಬೆಂಕಿಯು ಅದರೊಳಗೆ ಸುಡುತ್ತಲೇ ಇರಬೇಕು. ಅದು ಆರಿಹೋಗಿರಬಾರದು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆಯನ್ನು ಹಾಕಬೇಕು. ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಬಲಿ ಅರ್ಪಣೆಗಳ ಕೊಬ್ಬನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಲಿಪೀಠದ ಮೇಲಿನ ಬೆಂಕಿ ದಹನಬಲಿ ದ್ರವ್ಯದಿಂದ ಉರಿಯುತ್ತಲೇ ಇರಬೇಕು. ಅದು ಆರಿಹೋಗಬಾರದು. ಪ್ರತೀ ದಿನ ಬೆಳಿಗ್ಗೆ ಯಾಜಕನು ಕಟ್ಟಿಗೆಯನ್ನು ತಂದುಹಾಕಿ ಉರಿಸಿ, ಅದರ ಮೇಲೆ ದಹನ ದ್ರವ್ಯವನ್ನು ಕ್ರಮಪಡಿಸಿ, ಶಾಂತಿಸಮಾಧಾನ ಬಲಿಪ್ರಾಣಿಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ ಬೆಂಕಿ ಉರಿಸಿ ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ವೇದಿಕೆಯ ಮೇಲೆ ಬೆಂಕಿ ಉರಿಯುತ್ತಲೇ ಇರಬೇಕು. ಅದನ್ನು ಆರಿ ಹೋಗುವುದಕ್ಕೆ ಬಿಡಬಾರದು, ಯಾಜಕನು ಪ್ರತಿ ಮುಂಜಾನೆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಸಿದ್ಧಪಡಿಸಿ, ಸಮಾಧಾನಯಜ್ಞದ ಕೊಬ್ಬನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:12
14 ತಿಳಿವುಗಳ ಹೋಲಿಕೆ  

ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.


ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು.


“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.


ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಬಲಿಪೀಠದ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು, ಅದು ಎಂದಿಗೂ ಆರಬಾರದು.


ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು