Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:13 - ಕನ್ನಡ ಸಮಕಾಲಿಕ ಅನುವಾದ

13 ಬಲಿಪೀಠದ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು, ಅದು ಎಂದಿಗೂ ಆರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಲಿಪೀಠದ ಮೇಲೆ ಬೆಂಕಿ ಯಾವಾಗಲೂ ಉರಿಯುತ್ತಿರಬೇಕು, ಆರಿಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬೆಂಕಿಯು ವೇದಿಕೆಯ ಮೇಲೆ ಉರಿಯುತ್ತಲೇ ಇರಬೇಕು; ಆರಿಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:13
9 ತಿಳಿವುಗಳ ಹೋಲಿಕೆ  

“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.


ಬಲಿಪೀಠದ ಮೇಲೆ ಬೆಂಕಿಯು ಅದರೊಳಗೆ ಸುಡುತ್ತಲೇ ಇರಬೇಕು. ಅದು ಆರಿಹೋಗಿರಬಾರದು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆಯನ್ನು ಹಾಕಬೇಕು. ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಬಲಿ ಅರ್ಪಣೆಗಳ ಕೊಬ್ಬನ್ನು ಸುಡಬೇಕು.


“ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.


ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.”


“ಅವರು ನನಗೆ ಯಾಜಕ ಸೇವೆಮಾಡುವಂತೆ ನೀನು ಅವರನ್ನು ಶುದ್ಧ ಮಾಡಲು ಮಾಡಬೇಕಾದದ್ದೇನೆಂದರೆ: ದೋಷವಿಲ್ಲದ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ,


ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.


ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.


ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ಭಯಾನಕತೆಯಿಂದ ಅವರ ಕೋಟೆ ಬೀಳುವುದು, ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವ ದೇವರು ಘೋಷಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು