Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:15 - ಕನ್ನಡ ಸಮಕಾಲಿಕ ಅನುವಾದ

15 ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರಲ್ಲಿ ಒಬ್ಬನು ನೈವೇದ್ಯವಾದುದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಅದರ ಮೇಲಿರುವ ಸಾಂಬ್ರಾಣಿಯೆಲ್ಲವನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವದಕ್ಕಾಗಿ ಎಣ್ಣೆ ಹೊಯಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಅದರ ಮೇಲಿರುವ ಧೂಪವೆಲ್ಲವನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಜಕನು ಧಾನ್ಯನೈವೇದ್ಯದಿಂದ ಒಂದು ಹಿಡಿ ಶ್ರೇಷ್ಠ ಹಿಟ್ಟನ್ನು ಮತ್ತು ಎಣ್ಣೆಯನ್ನು ಮತ್ತು ಎಲ್ಲಾ ಧೂಪವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಅದನ್ನು ವೇದಿಕೆಯ ಮೇಲೆ ಸುಡಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:15
5 ತಿಳಿವುಗಳ ಹೋಲಿಕೆ  

ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.


ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.


“ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು