ಯಾಜಕಕಾಂಡ 6:17 - ಕನ್ನಡ ಸಮಕಾಲಿಕ ಅನುವಾದ17 ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರನಿಗೆ ಹೋಮ ರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಡಲಾಗಿದೆ. ಅದಕ್ಕೆ ಹುಳಿ ಕಲಸಿ ಸುಡಕೂಡದು. ದೋಷಪರಿಹಾರಕ ಬಲಿಯಂತೆ ಹಾಗು ಪ್ರಾಯಶ್ಚಿತ್ತ ಬಲಿದ್ರವ್ಯದಂತೆ ಅದು ಸಹ ಮಹಾಪರಿಶುದ್ಧವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದಕ್ಕೆ ಹುಳಿಕಲಸಿ ಸುಡಕೂಡದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹುಳಿಕಲಸಿ ರೊಟ್ಟಿ ಸುಡಬಾರದು. ನನಗೆ ಅಗ್ನಿಯ ಮೂಲಕ ಹೋಮವಾಗಿ ಅರ್ಪಿಸಿದ ಸಮರ್ಪಣೆಗಳಲ್ಲಿ ನಾನು ಅದನ್ನು ಯಾಜಕರ ಪಾಲನ್ನಾಗಿ ಕೊಟ್ಟಿದ್ದೇನೆ. ಅದು ಪಾಪಪರಿಹಾರಕ ಯಜ್ಞದಂತೆಯೂ ದೋಷಪರಿಹಾರಕ ಯಜ್ಞದಂತೆಯೂ ಮಹಾ ಪವಿತ್ರವಾಗಿದೆ. ಅಧ್ಯಾಯವನ್ನು ನೋಡಿ |