ಯಾಜಕಕಾಂಡ 6:18 - ಕನ್ನಡ ಸಮಕಾಲಿಕ ಅನುವಾದ18 ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’ ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆರೋನನ ವಂಶಜರಾದ ಗಂಡಸರೆಲ್ಲರು ಅದನ್ನು ತಿನ್ನಬಹುದು. ಸರ್ವೇಶ್ವರನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ಶಾಶ್ವತ ನಿಯಮವಾಗಿ ಆರೋನನ ಸಂತತಿಗೆ ಸಲ್ಲತಕ್ಕದು. ಆ ದ್ರವ್ಯಗಳಿಗೆ ಸೋಂಕಿದೆಲ್ಲವೂ ಪರಿಶುದ್ಧವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ನಿಮ್ಮಸಂತತಿಯವರಿಗೂ ಸಲ್ಲತಕ್ಕದ್ದೆಂಬದು ಶಾಶ್ವತ ನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆರೋನನ ವಂಶದವರಾದ ಗಂಡಸರೆಲ್ಲರೂ ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳನ್ನು ತಿನ್ನಬಹುದು. ಇದು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿದೆ. ಈ ಕಾಣಿಕೆಗಳಿಗೆ ತಗಲಿದ್ದೆಲ್ಲಾ ಪವಿತ್ರವಾಗುತ್ತವೆ.” ಅಧ್ಯಾಯವನ್ನು ನೋಡಿ |