ಯಾಜಕಕಾಂಡ 6:20 - ಕನ್ನಡ ಸಮಕಾಲಿಕ ಅನುವಾದ20 “ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಆರೋನನಿಗೆ ಅಭಿಷೇಕವಾದ ದಿನ ಮೊದಲ್ಗೊಂಡು ಅವನೂ ಅವನ ವಂಶಜರೂ ಸರ್ವೇಶ್ವರನಿಗೆ ಸಮರ್ಪಿಸಬೇಕಾದ ಧಾನ್ಯನೈವೇದ್ಯದ ಕ್ರಮ ಇದು: ಅವರು ದಿನನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಬೆಳಿಗ್ಗೆ ಅರ್ಧ, ಸಂಜೆ ಅರ್ಧ, ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯನೈವೇದ್ಯಕ್ರಮ ಹೇಗಂದರೆ - ಅವರು ನಿತ್ಯವೂ ಮೂರು ಸೇರು ಗೋದಿ ಹಿಟ್ಟನ್ನು, ಹೊತ್ತಾರೆ ಅರ್ಧವನ್ನೂ ಸಾಯಂಕಾಲ ಅರ್ಧವನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |