Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:21 - ಕನ್ನಡ ಸಮಕಾಲಿಕ ಅನುವಾದ

21 ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕಬ್ಬಿಣದ ಹೆಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಸರ್ವೇಶ್ವರನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗ ಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಟ್ಟು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:21
8 ತಿಳಿವುಗಳ ಹೋಲಿಕೆ  

ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.


ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು.


ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು.


ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.


“ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.


ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು.


ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.


“ ‘ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು