Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:22 - ಕನ್ನಡ ಸಮಕಾಲಿಕ ಅನುವಾದ

22 ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತ ಯಾಜಕಪಟ್ಟಕ್ಕೆ ಬರುತ್ತಾನೋ ಅವನೇ ಅದನ್ನು ಸಮರ್ಪಿಸಬೇಕು. ಇದು ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ನಿಶ್ಶೇಷವಾಗಿ ಹೋಮಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯಸಮರ್ಪಣೆ ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:22
13 ತಿಳಿವುಗಳ ಹೋಲಿಕೆ  

ಒಂದು ಕಡೆ ಆ ಯಾಜಕರು ಮುಂದುವರಿಯದಂತೆ ಮರಣವು ಅಡ್ಡಿಯಾದದ್ದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ಇಸ್ರಾಯೇಲರು ಯಾಕಾನನ ಮಕ್ಕಳ ಬಾವಿಗಳ ಬಳಿಯಿಂದ ಬೇರೋತದಿಂದ ಮೋಸೇರಕ್ಕೆ ಹೊರಟಾಗ, ಆರೋನನು ಅಲ್ಲಿ ಮರಣಹೊಂದಿದನು. ಅಲ್ಲೇ ಅವನನ್ನು ಹೂಳಿಟ್ಟೆವು. ಅವನ ಮಗ ಎಲಿಯಾಜರನು ಅವನ ಬದಲಿಗೆ ಯಾಜಕನಾದನು.


ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು.


“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.


“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.


ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು.


ಏಕೆಂದರೆ ಯಾಜಕನಿಗಾಗಿರುವ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಸಂಪೂರ್ಣವಾಗಿ ಸುಟ್ಟಿರಬೇಕು. ಅದನ್ನು ತಿನ್ನಬಾರದು,” ಎಂದರು.


ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.


ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು.


ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು