Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:27 - ಕನ್ನಡ ಸಮಕಾಲಿಕ ಅನುವಾದ

27 ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಪ್ರಾಣಿಯ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು, ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರ ಸ್ಥಳದಲ್ಲೇ ಒಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲಾ ಪರಿಶುದ್ಧವಾಗುವದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯೂ ಪವಿತ್ರವಾಗುವನು. “ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಆ ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:27
11 ತಿಳಿವುಗಳ ಹೋಲಿಕೆ  

ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.


ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


“ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದು ಆಕೆಯು ತನ್ನೊಳಗೆ ಹೇಳಿಕೊಂಡಳು.


ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪ್ರತಿಷ್ಠಿಸಿದ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾದರೂ ಎಣ್ಣೆಯನ್ನಾದರೂ ಯಾವ ವಿಧವಾದ ಆಹಾರವನ್ನಾದರೂ ಮುಟ್ಟಿದರೆ, ಅದು ಪರಿಶುದ್ಧವಾಗುವುದೋ? ಕೇಳು,’ ” ಎಂದನು. ಹಗ್ಗಾಯನು ಹಾಗೆ ವಿಚಾರಿಸಲು, ಯಾಜಕರು, “ಇಲ್ಲ,” ಎಂದು ಉತ್ತರಕೊಟ್ಟರು.


ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.


ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’ ” ಎಂದರು.


ಅವು ಮಹಾಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವುದೆಲ್ಲವೂ ಪರಿಶುದ್ಧವಾಗಿರಬೇಕು.


ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.


“ ‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು.


ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು