ಯಾಜಕಕಾಂಡ 6:5 - ಕನ್ನಡ ಸಮಕಾಲಿಕ ಅನುವಾದ5 ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ, ಪಡೆದವುಗಳೆಲ್ಲವುಗಳನ್ನೂ ಕೂಡಿಸಿ, ಹಿಂದಕ್ಕೆ ಕೊಡಬೇಕು. ಪ್ರಾಯಶ್ಚಿತ್ತದ ಬಲಿ ಅರ್ಪಿಸುವ ದಿನದಲ್ಲಿ, ಅದರ ಯಜಮಾನನು ಯಾವನಾಗಿರುವನೋ, ಅವನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬೇರೆ ಯಾವದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನೂ ಪೂರ್ತಿಯಾಗಿ ತಂದುಕೊಡಬೇಕಲ್ಲದೆ ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ಅದರ ನ್ಯಾಯವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸುಳ್ಳಾಣೆ ಇಟ್ಟುಕೊಂಡ ವಸ್ತುವನ್ನಾಗಲಿ ಸಂಪೂರ್ಣವಾಗಿ ತಂದುಕೊಡಬೇಕು. ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದುಕೊಡಬೇಕು. ಅಧ್ಯಾಯವನ್ನು ನೋಡಿ |