ಯಾಜಕಕಾಂಡ 6:6 - ಕನ್ನಡ ಸಮಕಾಲಿಕ ಅನುವಾದ6 ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರು ಪರಿಹಾರಕ್ಕಾಗಿ, ತಮ್ಮ ಹಿಂಡಿನಿಂದ ಕಳಂಕರಹಿತವಾದ ಒಂದು ಟಗರನ್ನು ಅಥವಾ ಅದಕ್ಕೆ ಸರಿಸಮಾನವಾದುದ್ದನ್ನು ತಂದು ಯಾಜಕನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮತ್ತು ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಯಾಜಕನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು. ಅಧ್ಯಾಯವನ್ನು ನೋಡಿ |