Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:7 - ಕನ್ನಡ ಸಮಕಾಲಿಕ ಅನುವಾದ

7 ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಾಜಕನು ಅವರಿಗೋಸ್ಕರ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವರು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾದರೋ ಆ ವಿಷಯದಲ್ಲಿ ಅವರಿಗೆ ಕ್ಷಮೆ ದೊರಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಳಿಕ ಯಾಜಕನು ಯೆಹೋವನ ಸನ್ನಿಧಿಗೆ ಹೋಗಿ ಅವನನ್ನು ಶುದ್ಧಿಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:7
22 ತಿಳಿವುಗಳ ಹೋಲಿಕೆ  

ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಆದರೆ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ ಅವನು ಅವುಗಳಿಂದ ಉಳಿಯುವನು.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.


ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”


ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,


ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಪ್ರಾಯಶ್ಚಿತ್ತದ ಬಲಿಯನ್ನು ವಧಿಸಬೇಕು. ಅದರ ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.


“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು