ಯಾಜಕಕಾಂಡ 7:16 - ಕನ್ನಡ ಸಮಕಾಲಿಕ ಅನುವಾದ16 “ ‘ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಯಿಚ್ಛೆಯಾದ ಸಮರ್ಪಣೆಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ಅದನ್ನು ತಿನ್ನಬೇಕು. ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಯಾರಾದರು ಹರಕೆಯನ್ನು ಸಲ್ಲಿಸುವುದಕ್ಕಾಗಿ ಅಥವಾ ಸ್ವೇಚ್ಛೆಯಿಂದ ಅಂಥ ಬಲಿಯನ್ನು ಒಪ್ಪಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಪೂರ್ತಿಯಾಗಿ ಊಟ ಮಾಡಬೇಕಾಗಿಲ್ಲ; ಮಿಕ್ಕದ್ದನ್ನು ಮರುದಿನ ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾರಾದರೂ ಹರಕೆಯನ್ನು ಸಲ್ಲಿಸುವದಕ್ಕಾಗಲಿ ಸ್ವೇಚ್ಫೆಯಿಂದಾಗಲಿ ಅಂಥ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ವಿುಕ್ಕದ್ದನ್ನು ಮರುದಿನದಲ್ಲಿ ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು. ಅಧ್ಯಾಯವನ್ನು ನೋಡಿ |