Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:18 - ಕನ್ನಡ ಸಮಕಾಲಿಕ ಅನುವಾದ

18 ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಬಲಿಪ್ರಾಣಿಯ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದ್ದೇ ಆದರೆ ಆ ಬಲಿ ಸ್ವೀಕೃತವಾಗುವುದಿಲ್ಲ. ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರಕುವುದಿಲ್ಲ. ಅದು ಹೇಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವೇ ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವದಿಲ್ಲ. ಅದು ಹೇಯವಾದದ್ದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಬ್ಬನು ತನ್ನ ಸಮಾಧಾನಯಜ್ಞದಲ್ಲಿ ಉಳಿದದ್ದನ್ನು ಮೂರನೆಯ ದಿನದಲ್ಲಿ ತಿಂದರೆ, ಯೆಹೋವನು ಅವನ ವಿಷಯದಲ್ಲಿ ಸಂತೋಷಗೊಳ್ಳುವುದಿಲ್ಲ. ಯೆಹೋವನು ಆ ಯಜ್ಞವನ್ನು ಅವನ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆ ಯಜ್ಞವು ಅಸಹ್ಯವಸ್ತುವಾಗುವುದು. ಆ ಮಾಂಸವನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:18
31 ತಿಳಿವುಗಳ ಹೋಲಿಕೆ  

ಈ ನಿಮ್ಮ ಸಮರ್ಪಣೆಯನ್ನು ಕಣದ ಧಾನ್ಯದ ಹಾಗೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುವುದು.


ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ”


“ ‘ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಹೇಯವಾಗಿದೆ. ಅದನ್ನು ತಿನ್ನಬಾರದು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.


ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.


ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.


ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”


ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


ಸಮಾಧಿಗಳಲ್ಲಿ ಉಳಿದು, ಗವಿಗಳಲ್ಲಿ ತಂಗುವರು. ಹಂದಿಯ ಮಾಂಸವನ್ನು ತಿನ್ನುವರು ತಮ್ಮ ಪಾತ್ರೆಗಳಲ್ಲಿ ಅಶುದ್ಧ ಪದಾರ್ಥಗಳ ಸಾರನ್ನು ಇಟ್ಟುಕೊಂಡು,


ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ.


ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”


“ ‘ನೀನು ನಿನ್ನ ತಾಯಿಯ ಸಹೋದರಿ ಇಲ್ಲವೆ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡ. ಅದು ಸಮೀಪ ಬಂಧುವನ್ನು ಅಗೌರವಿಸಿದ ಹಾಗೆ ಅದಕ್ಕೆ ನೀವಿಬ್ಬರೂ ಜವಾಬ್ದಾರರು.


“ ‘ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯ ಬೆತ್ತಲೆತನವನ್ನು ನೋಡಿದರೆ, ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ. ಅವರನ್ನು ತಮ್ಮ ಜನರ ಮಧ್ಯದಿಂದ ತೆಗೆದುಹಾಕಬೇಕು. ಅವರ ರಕ್ತವು ಅವರ ಮೇಲೆ ಇರುವುದು. ಅವನು ತನ್ನ ಸಹೋದರಿಯನ್ನು ಸಂಗಮಿಸಿದ್ದರಿಂದ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳುವನು.


ಆದರೆ ಅವನು ಬಟ್ಟೆಗಳನ್ನು ಒಗೆದುಕೊಳ್ಳದೆ ಇದ್ದರೆ, ಇಲ್ಲವೆ ತಾನು ಸ್ನಾನ ಮಾಡದಿದ್ದರೆ, ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.’ ”


ಆಗ ಆರೋನನು ಮೋಶೆಗೆ, “ಈ ದಿನ ಅವರು ಪಾಪಪರಿಹಾರ ಬಲಿಯನ್ನು ಮತ್ತು ಅದರ ದಹನಬಲಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದ್ದರು. ಆದರೆ ಈ ದುಃಖ ಘಟನೆಗಳು ನನಗೆ ಸಂಭವಿಸಿದೆ. ಹೀಗಿರುವಲ್ಲಿ ಇಂದು ನಾನು ಆ ಪಾಪ ಪರಿಹಾರದ ಬಲಿದ್ರವ್ಯವನ್ನು ಊಟಮಾಡಿದ್ದರೆ, ಯೆಹೋವ ದೇವರು ಸಂತೋಷಪಡುತ್ತಿದ್ದರೋ?” ಎಂದನು.


“ಅದು ಮಹಾಪರಿಶುದ್ಧವಾದ್ದರಿಂದಲೂ ಯೆಹೋವ ಸನ್ನಿಧಿಯಲ್ಲಿ ಅವರಿಗಾಗಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿಯೂ ನೀವು ಸಭೆಯ ಅಪರಾಧವನ್ನು ಹೊರುವುದಕ್ಕಾಗಿ ದೇವರು ಅದನ್ನು ಕೊಟ್ಟಿದ್ದೆಂದೂ ನೀವು ತಿಳಿದು ಪಾಪ ಪರಿಹಾರದ ಬಲಿಯನ್ನು ಪರಿಶುದ್ಧವಾದ ಸ್ಥಳದಲ್ಲಿ ಏಕೆ ತಿನ್ನಲಿಲ್ಲ?


“ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.


“ ‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


“ ‘ನೀವು ನಿಮ್ಮ ಯೆಹೋವ ದೇವರಿಗೆ ಸಮಾಧಾನದ ಬಲಿಯನ್ನು ಸಮರ್ಪಿಸುವುದಾದರೆ, ನೀವು ಆತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿಯೇ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು