Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:19 - ಕನ್ನಡ ಸಮಕಾಲಿಕ ಅನುವಾದ

19 “ ‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ [ಯಜ್ಞಪಶುವಿನ] ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಮಾತ್ರವಲ್ಲದೆ ಜನರು ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನಬಾರದು. ಅವರು ಈ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಶುದ್ಧನಾಗಿರುವ ಪ್ರತಿಯೊಬ್ಬನು ಸಮಾಧಾನ ಸಮರ್ಪಣೆಯ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:19
12 ತಿಳಿವುಗಳ ಹೋಲಿಕೆ  

ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು.


ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.


ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.


ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.


ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು