Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:21 - ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾವನಿಗಾದರೂ ಮನುಷ್ಯ ದೇಹದಿಂದುಂಟಾದ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧವಸ್ತು ಇವುಗಳಲ್ಲಿ ಯಾವದಾದರೂ ಸೋಂಕಿದರೆ ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:21
31 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಹೇಳಿದ್ದೇನೆಂದರೆ,


“ ‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು.


ಆದರೆ ರೆಕ್ಕಗಳೂ ಪೊರೆಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು. ಅವು ನಿಮಗೆ ಅಶುದ್ಧ.


ಅಸಹ್ಯವಾದ ಯಾವುದನ್ನಾದರೂ ತಿನ್ನಬಾರದು.


“ ‘ಆರೋನನ ಸಂತತಿಯವರಲ್ಲಿ ಯಾವನಾದರೂ ಚರ್ಮರೋಗ ಇಲ್ಲವೆ ಸ್ರಾವವುಳ್ಳವನಿದ್ದರೆ, ಅವನು ಶುದ್ಧನಾಗುವವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು


“ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು.


“ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ, ಅಂಥವನನ್ನು ತನ್ನ ಜನರಿಂದ ತೆಗೆದುಹಾಕಬೇಕು.’ ”


ಏಕೆಂದರೆ ಮನುಷ್ಯರು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಬಲಿ, ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.


ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.


ಏಳು ದಿನಗಳವರೆಗೆ ಹುಳಿ ಹಿಟ್ಟು ನಿಮ್ಮ ಮನೆಗಳಲ್ಲಿ ಸಿಕ್ಕಬಾರದು, ಏಕೆಂದರೆ ಹುಳಿ ಬೆರೆಸಿದ್ದನ್ನು ಯಾರು ತಿನ್ನುವರೋ ಅವರು ಪರದೇಶದವರಾಗಲಿ, ಸ್ವದೇಶದವರಾಗಲಿ ಅವರನ್ನು ಇಸ್ರಾಯೇಲ್ ಸಭೆಯೊಳಗಿಂದ ಬಹಿಷ್ಕರಿಸಬೇಕು.


ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.


ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,


“ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು.


ಇದಲ್ಲದೆ ಅಪವಿತ್ರನಾದವನು ಮುಟ್ಟುವಂಥಾದ್ದೆಲ್ಲ ಅಪವಿತ್ರವಾಗುವುದು, ಅವನನ್ನು ಮುಟ್ಟಿದವನು ಸಂಜೆಯವರೆಗೆ ಅಪವಿತ್ರನಾಗಿರುವನು,” ಎಂದು ಹೇಳಿದರು.


ಆದರೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ, “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿರಬಹುದು; ನಿಶ್ಚಯವಾಗಿ ಅಶುಚಿಯಾಗಿದ್ದಾನೆ,” ಎಂದು ಹೇಳಿಕೊಂಡನು.


ಆದ್ದರಿಂದ ಅದನ್ನು ತಿನ್ನುವ ಪ್ರತಿಯೊಬ್ಬರೂ ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಏಕೆಂದರೆ ಯೆಹೋವ ದೇವರಿಗೆ ಪವಿತ್ರವಾದದ್ದನ್ನು ಅವರು ಅಶುದ್ಧಮಾಡಿದ್ದಾನೆ. ಅಂಥವರನ್ನು ತಮ್ಮ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.


ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.


ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.


ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು