Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:31 - ಕನ್ನಡ ಸಮಕಾಲಿಕ ಅನುವಾದ

31 ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಎದೆಯ ಭಾಗ ಆರೋನನಿಗೂ ಅವನ ವಂಶಜರಿಗೂ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಅವನ ವಂಶದವರಿಗೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬಳಿಕ ಯಾಜಕನು ವೇದಿಕೆಯ ಮೇಲೆ ಕೊಬ್ಬನ್ನು ಹೋಮಮಾಡಬೇಕು. ಆದರೆ ಪಶುವಿನ ಎದೆಯ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:31
13 ತಿಳಿವುಗಳ ಹೋಲಿಕೆ  

ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”


ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.


ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.


ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.


ನೈವೇದ್ಯವಾಗಿ ನಿವಾಳಿಸುವ ಎದೆಯೂ ಬಲಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನದಾಗಿರಬೇಕು.


ಮೋಶೆಯು ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಿದನು. ಏಕೆಂದರೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಷ್ಠಿತ ಟಗರು ಮೋಶೆಯ ಪಾಲಾಗಿತ್ತು.


ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.


ಅದರಲ್ಲಿ ಉಳಿದದ್ದನ್ನು ಆರೋನನೂ, ಅವನ ಪುತ್ರರೂ ತಿನ್ನಬೇಕು. ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು. ಅದನ್ನು ಅವರು ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.


ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”


ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು, ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನ್ನ ಪಾಲಾಗಿರುವುದು.


“ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.


ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು