Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:32 - ಕನ್ನಡ ಸಮಕಾಲಿಕ ಅನುವಾದ

32 ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀವು ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಪ್ರಾಣಿಯ ಬಲತೊಡೆಯನ್ನು ಯಾಜಕನಿಗಾಗಿ ಪ್ರತ್ಯೇಕಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲದೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವು ಸಮಾಧಾನಯಜ್ಞದ ಪಶುವಿನ ಬಲತೊಡೆಯನ್ನು ಸಹ ಯಾಜಕನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:32
12 ತಿಳಿವುಗಳ ಹೋಲಿಕೆ  

ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.


ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”


ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು.


ನೀನೂ, ನಿನ್ನೊಂದಿಗೆ ನಿನ್ನ ಪುತ್ರರೂ ನಿನ್ನ ಪುತ್ರಿಯರೂ ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಿಸುವ ತೊಡೆಯ ಭಾಗವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ಇಸ್ರಾಯೇಲರ ಸಮಾಧಾನದ ಬಲಿಗಳಲ್ಲಿ ನಿನಗೂ ನಿನ್ನ ಪುತ್ರರಿಗೂ ಸಲ್ಲುವಂಥವುಗಳಾಗಿವೆ.


“ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.


ಸಮಾಧಾನದ ಬಲಿಗಳ ರಕ್ತವನ್ನೂ, ಕೊಬ್ಬನ್ನೂ ಸಮರ್ಪಿಸುವ ಆರೋನನ ಪುತ್ರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.


ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.


ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ, ಅದರ ಸಂಗಡ ಇದ್ದುದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುಯೇಲನು ಸೌಲನಿಗೆ, “ನಿನಗಾಗಿ ಪ್ರತ್ಯೇಕಿಸಿದ್ದು ಇದೇ. ನಾನು ಜನರನ್ನು ಭೋಜನಕ್ಕೆ ಕರೆದಿದ್ದೇನೆಂದು ಹೇಳಿದ ಕಾಲದಿಂದ ಈವರೆಗೂ ನಿನಗೋಸ್ಕರ ಪ್ರತ್ಯೇಕವಾಗಿ ಇಟ್ಟಿದ್ದು ಇದೇ, ಇದನ್ನು ತಿನ್ನು,” ಎಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುಯೇಲನ ಸಂಗಡ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು