Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:38 - ಕನ್ನಡ ಸಮಕಾಲಿಕ ಅನುವಾದ

38 ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟರು. ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರು ಅರ್ಪಿಸಬೇಕಾದುದನ್ನು ಸರ್ವೇಶ್ವರನಿಗೆ ಅರ್ಪಿಸಬೇಕೆಂದು ಮೋಶೆ ಆಜ್ಞಾಪಿಸಿ ಮೇಲ್ಕಂಡ ವಿಧಿಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ - ಇಸ್ರಾಯೇಲ್ಯರು ಅರ್ಪಿಸಬೇಕಾದದ್ದನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ವಿಧಿಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೆಹೋವನು ಮೋಶೆಗೆ ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಕೊಟ್ಟನು. ಇಸ್ರೇಲರು ಯೆಹೋವನಿಗೆ ತಮ್ಮ ಯಜ್ಞಗಳನ್ನು ಅರ್ಪಿಸಬೇಕೆಂದು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸಿದ ದಿನದಲ್ಲಿ ಯೆಹೋವನು ಆ ನಿಯಮಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:38
5 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ, ಇಸ್ರಾಯೇಲರಿಗೂ ಮಧ್ಯದಲ್ಲಿ ಇಟ್ಟ ನಿಯಮಗಳೂ, ನ್ಯಾಯಗಳೂ, ಆಜ್ಞಾವಿಧಿಗಳೂ ಇವೇ.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು