Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:7 - ಕನ್ನಡ ಸಮಕಾಲಿಕ ಅನುವಾದ

7 “ ‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಪ್ರಾಯಶ್ಚಿತ್ತ ಹಾಗು ದೋಷಪರಿಹಾರಕ ಬಲಿ ಹೋಮ ಶೇಷಗಳಿಗೆ ಇರುವ ವಿಧಿ ಒಂದೇ; ಈ ಹೋಮಶೇಷಗಳು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ದೋಷಪರಿಹಾರಕಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ವಿಧಿಯುಂಟು; ಹೇಗಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಒಂದೇ ರೀತಿಯ ನಿಯಮಗಳು ಈ ಎರಡು ಸಮರ್ಪಣೆಗಳಿಗೆ ಅನ್ವಯಿಸುತ್ತವೆ. ಯಜ್ಞ ಸಮರ್ಪಿಸುವ ಯಾಜಕನು ಆಹಾರಕ್ಕಾಗಿ ಅದರ ಮಾಂಸವನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:7
11 ತಿಳಿವುಗಳ ಹೋಲಿಕೆ  

ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು.


ನೀವು ಇಸ್ರಾಯೇಲ್ ಜನರ ಕುರಿತು ಆಲೋಚಿಸಿರಿ: ಯಜ್ಞಾರ್ಪಿತವಾದದ್ದನ್ನು ತಿನ್ನುವವರು ಬಲಿಪೀಠದೊಡನೆ ಭಾಗಿಗಳಾಗಿದ್ದಾರಲ್ಲವೇ?


ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.


ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.


ಆದರೆ ಪ್ರಾಯಶ್ಚಿತ್ತ ಬಲಿಯ ಹಣವನ್ನು, ಪಾಪ ಪರಿಹಾರದ ಬಲಿಯ ಹಣವನ್ನು ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬರಲಿಲ್ಲ, ಅದು ಯಾಜಕರದಾಗಿತ್ತು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಆದರೆ ಅಪರಾಧಕ್ಕೆ ಬದಲು ಕೊಡುವುದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಅದು ಯೆಹೋವ ದೇವರಿಗೆ ಸೇರಬೇಕು. ಅದು ದೋಷಪರಿಹಾರಕ್ಕಾಗಿ ಅರ್ಪಿಸಲಾಗುವ ಪ್ರಾಯಶ್ಚಿತ್ತದ ಟಗರು, ಇವೆರಡೂ ಯಾಜಕನಿಗೆ ಸೇರಬೇಕು.


ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು