ಯಾಜಕಕಾಂಡ 8:21 - ಕನ್ನಡ ಸಮಕಾಲಿಕ ಅನುವಾದ21 ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳಿಸಿ ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮವಾಗಿತ್ತು. ಅಧ್ಯಾಯವನ್ನು ನೋಡಿ |