ಯಾಜಕಕಾಂಡ 8:22 - ಕನ್ನಡ ಸಮಕಾಲಿಕ ಅನುವಾದ22 ಅವನು ಪ್ರತಿಷ್ಠೆಯ ಟಗರಾದ ಇನ್ನೊಂದು ಟಗರನ್ನು ತಂದನು. ಆಗ ಆರೋನನೂ, ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಾದ ಮೇಲೆ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ಮೋಶೆ ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಮೇಲೆ ಅವನು ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು. ಅಧ್ಯಾಯವನ್ನು ನೋಡಿ |